HomeKarnatakaBIG NEWS: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ; ತನಿಖೆಗಾಗಿ ಮೂರು ವಿಶೇಷ ತಂಡ ರಚನೆ

BIG NEWS: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ; ತನಿಖೆಗಾಗಿ ಮೂರು ವಿಶೇಷ ತಂಡ ರಚನೆ

ಬೆಂಗಳೂರು: ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ.

ಈ ಪ್ರಕರಣ ಸಂಬಂಧ ತನಿಖೆಗೆ ಮೂರು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗ ಡಿಸಿಪಿ ಶೇಖರ್ ತಿಳಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ಈ ರೀತಿ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಾಸೀರ್ ಹುಸೇನ್ ಜೊತೆ ಬಂದವರ ಪಟ್ಟಿ ಸಂಗ್ರಹಿಸಲಾಗಿದ್ದು, ಟೆಕ್ನಿಕಲ್ ಅನಾಲಿಸಿಸ್ ಹಾಗೂ ವಿಡಿಯೋಗಳನ್ನು ಪರಿಗಣಿಸುವ ಕಾರ್ಯ ಮಾಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸೌಧ ಠಾಣೆ ಪೊಲೀಸರು ಪಾಕಿಸ್ತಾನ ಪರ ಘೋಷಣೆ ಕೂಗಿದವರ ಹುಡುಕಾಟ ನಡೆಸಿದ್ದಾರೆ. ಘೋಷಣೆ ಕೂಗಿದ ವೇಳೆ ನಾಸೀರ್ ಹುಸೇನ್ ಬಳಿ ಇದ್ದ ವ್ಯಕ್ತಿಯನ್ನು ಇಂದು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular