HomeKarnatakaBIG NEWS: ಬಸ್-ಸ್ಕೂಟಿ ಭೀಕರ ಅಪಘಾತ; ತಾಯಿ-ಮಗಳು ದುರ್ಮರಣ

BIG NEWS: ಬಸ್-ಸ್ಕೂಟಿ ಭೀಕರ ಅಪಘಾತ; ತಾಯಿ-ಮಗಳು ದುರ್ಮರಣ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಂಕಿಯಲ್ಲಿ ನಡೆದಿದೆ.

ಸವಿತಾ ರಾಜು ಆಚಾರಿ (40) ಹಾಗೂ ಅಂಕಿತಾ ಆಚಾರಿ (17) ಮೃತರು. ಮಂಕಿ ಜಾತ್ರೆಪೇಟೆಗೆ ತೆರಳಿ ತಾಯಿ-ಮಗಳು ಸ್ಕೂಟಿಯಲ್ಲಿ ವಾಪಾಸ್ ಆಗುತ್ತಿದ್ದರು. ಈ ವೇಳೆ ಮಂಗಳೂರಿನಿಂದ ಬೆಳಗಾವಿಯತ್ತ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ. ಸ್ಕೂಟಿಯಿಂದ ಕೆಳಗೆ ಬಿದ್ದ ತಾಯಿ-ಮಗಳ ಮೇಲೆಯೇ ಬಸ್ ಹರಿದಿದೆ.

ಗಂಭೀರವಾಗಿ ಗಾಯಗೊಂಡಿದ್ದ ತಾಯಿ-ಮಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಗದೇ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular