HomeKarnataka‘ಯಶಸ್ವಿನಿ ಯೋಜನೆ’ಗೆ ಹೊಸ ಸದಸ್ಯರ ನೋಂದಣಿಗೆ ಅವಧಿ ವಿಸ್ತರಣೆ : ರಾಜ್ಯ ಸರ್ಕಾರದಿಂದ ಆದೇಶ

‘ಯಶಸ್ವಿನಿ ಯೋಜನೆ’ಗೆ ಹೊಸ ಸದಸ್ಯರ ನೋಂದಣಿಗೆ ಅವಧಿ ವಿಸ್ತರಣೆ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:31-03-2024 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:01-01-2024 ರಿಂದ ದಿನಾಂಕ:28-02-2024 ರವರೆಗೆ ಮುಂದುವರೆಸಲಾಗಿತ್ತು.

ಮೇಲೆ ಓದಲಾದ ಕ್ರ.ಸಂ. (2) ರಲ್ಲಿ ಯಶಸ್ವಿನಿ ಯೋಜನೆಯು ಒಂದು ಜನಪ್ರಿಯ ಯೋಜನೆಯಾಗಿದ್ದು ಈ ಯೋಜನೆಯು ಹೆಚ್ಚಿನ ಸಂಖ್ಯೆಯ ಸಹಕಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಯೋಜನೆಯಡಿ ಇನ್ನೂ ಹೆಚ್ಚಿನ ಸದಸ್ಯರನ್ನು ನೋಂದಾಯಿಸಿಕೊಳ್ಳಲು ಅನುವಾಗುವಂತೆ ನೋಂದಣಿ ಅವಧಿಯನ್ನು ದಿ:31-03-2024 ರವರೆಗೆ ವಿಸ್ತರಿಸುವಂತೆ ಕೋರಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದುದರಿಂದ ಯಶಸ್ವಿನಿ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಸಹಕಾರಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಸದಸ್ಯತ್ವ ನೋಂದಣಿ ಅವಧಿಯನ್ನು ದಿನಾಂಕ:29-02-2024 ರಿಂದ ದಿನಾಂಕ:31-03-2024 ರವರೆಗೆ ವಿಸ್ತರಿಸಲು ತೀರ್ಮಾನಿಸಿ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:29-02-2024 ರಿಂದ ದಿನಾಂಕ:31-03-2024 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular