![](https://kannadadunia.com/wp-content/uploads/2024/02/nasir.png)
ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಹಿನ್ನೆಲೆಯಲ್ಲಿ ವಿಧಾನಸೌಧ ಪೊಲೀಸರು ಇದೀಗ ಮೂವರು ವಾಯ್ಸ್ ಸ್ಯಾಂಪಲ್ ಅನ್ನು ಎಫ್ ಎಸ್ ಎಲ್ ಗೆ ರವಾನೆ ಮಾಡಿದ್ದಾರೆ.
ಪಾಕ್ ಪರ ಘೋಷಣೆ ಕೂಗಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದು, ಈವರೆಗೆ 26 ಜನರ ಪಟ್ಟಿ ಮಾಡಿದ್ದು, ಈ ಪೈಕಿ ಮೂವರ ವಾಯ್ಸ್ ಸ್ಯಾಂಪಲ್ ಅನ್ನು ಎಫ್ಎಸ್ಎಲ್ ಗೆ ರವಾನಿಸಿದ್ದಾರೆ.
ಮೂವರು ಪ್ರಮುಖ ಆರೋಪಿಗಳ ವಾಯ್ಸ್ ಸ್ಯಾಂಪಲ್ ಅನ್ನು ಎಫ್ ಎಸ್ ಎಲ್ ಗೆ ರವಾನಿಸಿರುವ ಪೊಲೀಸರು ಸದ್ಯ ಎಸ್ ಎಲ್ ವರದಿಗಾಗಿ ಕಾಯುತ್ತಿದ್ದಾರೆ.ವರದಿ ಬಳಿಕ ಮತ್ತಷ್ಟು ಮಾಹಿತಿ ಸಂಗ್ರಹಿಸಿ ತನಿಖೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.