HomeKarnatakaBIG NEWS : ಮಾಜಿ 'IAS' ಅಧಿಕಾರಿ, ನಟ ಶಿವರಾಮ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಘರ್ಷ..!

BIG NEWS : ಮಾಜಿ ‘IAS’ ಅಧಿಕಾರಿ, ನಟ ಶಿವರಾಮ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಘರ್ಷ..!

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ, ನಟ ಶಿವರಾಮ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಘರ್ಷ ಆರಂಭವಾಗಿದ್ದು, ಛಲವಾದಿ ಮಹಾಸಭಾಕ್ಕೆ ಸೇರಿದ ಜಾಗದಲ್ಲೇ ಅಂತ್ಯಸಂಸ್ಕಾರ ನಡೆಸಲು ಆಗ್ರಹಿಸಲಾಗಿದೆ.

ಕೆ. ಶಿವರಾಮ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಛಲವಾದಿ ಮಹಾಸಭಾಕ್ಕೆ ಸೇರಿದ ಜಾಗದಲ್ಲೇ ನಡೆಸಲು ಅವಕಾಶ ನೀಡಬೇಕು ಎಂದು ಕುಟುಂಬದವರು ಮತ್ತು ಅಭಿಮಾನಿಗಳು ಕೋರಿದ್ದರು. ಆದರೆ, ಸರ್ಕಾರ ಇದಕ್ಕೆ ಒಪ್ಪಿಲ್ಲ ಎನ್ನಲಾಗಿದೆ. ಇದರಿಂದ ಆಕ್ರೋಶ ವ್ಯಕ್ತವಾಗಿದ್ದು, , ಛಲವಾದಿ ಮಹಾಸಭಾಕ್ಕೆ ಸೇರಿದ ಜಾಗದಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪಟ್ಟು ಹಿಡಿದಿದ್ದಾರೆ. ಶಿವರಾಮ್ ಓರ್ವ ಮಹಾನ್ ವ್ಯಕ್ತಿ, ಅಂತಹವರಿಗೆ ಸರ್ಕಾರ ಜಾಗ ಕೊಡದಿದ್ದರೆ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಬಂದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮುತ್ತಿಗೆ ಹಾಕಲಾಯಿತು.

ಇವತ್ತು ಬೆಂಗಳೂರಿನ ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ವೇಳೆಗೆ ಅಂತಿಮ ವಿಧಿವಿಧಾನಗಳ ಮೂಲಕ ಕೆ. ಶಿವರಾಮ್ ಅವರ ಅಂತ್ಯಕ್ರಿಯೆ ನೆರವೇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular