‘ಒಂದು ದೇಹ ಎಂಟು ಜೀವ, ಅಂಗಾಂಗ ದಾನ ಮಾಡಿ ಜೀವ ಉಳಿಸಿ’ : ಆರೋಗ್ಯ ಇಲಾಖೆ

ಬೆಂಗಳೂರು : ಒಂದು ದೇಹ ಎಂಟು ಜೀವ,ಅಂಗಾಂಗ  ದಾನ ಮಾಡಿ ಜೀವ ಉಳಿಸಿ, ಮರಣದ ನಂತರವೂ ಇನ್ನೊಬ್ಬರ ಜೀವನಕ್ಕೆ ಬೆಳಕಾಗಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ಸಚಿವರು “ಮುಖ್ಯಮಂತ್ರಿಗಳಾದ ಸಿದ್ದರಾಮಯಯ್ಯ ನವರು ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿದರು. ಅಂಗಾಂಗ ದಾನ ಮಾಡಿದ 7 ಕುಟುಂಬದವರನ್ನು ಸನ್ಮಾನಿಸಿ, ಗೌರವಿಸಲಾಯಿತು. ರಾಜ್ಯದಲ್ಲಿ ಅಂಗಾಂಗ ದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯೋನ್ಮುಖವಾಗಿದೆ’’ ಎಂದಿದ್ದಾರೆ.

ಜೀವಸಾರ್ಥಕತೆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಅಂಗಾಂಗ ದಾನಕ್ಕೆ ಒತ್ತು ನೀಡಿದರೆ ಜೀವಗಳನ್ನು ಉಳಿಸಬಹುದು. ಒಬ್ಬ ಮೃತ ವ್ಯಕ್ತಿಯ ಅಂಗಾಂಗ ದಾನದಿಂದ 8 ಜೀವಗಳನ್ನು ಉಳಿಸಬಹುದು. ಯಾವುದೇ ವಯಸ್ಸು ಲಿಂಗ ಭೇದವಿಲ್ಲದೆ ಅಂಗಾಂಗ ಮತ್ತು ಅಂಗಾಂಶಗಳನ್ನು ದಾನ ಮಾಡಬಹುದು. ಪ್ರತಿಯೊಬ್ಬರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿಕೊಂಡು ಮತ್ತೊಬ್ಬರ ಜೀವಕ್ಕೆ ಸಂಜೀವಿನಿಯಾಗಿ ಎಂದು ಅವರು ಮನವಿ ಮಾಡಿದ್ದಾರೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read