HomeEntertainmentBIG NEWS : ಸ್ಯಾಂಡಲ್ ವುಡ್ ಗೆ ಸಿಎಂ ಗುಡ್ ನ್ಯೂಸ್ : 'ವಾರ್ಷಿಕ ಚಲನಚಿತ್ರ...

BIG NEWS : ಸ್ಯಾಂಡಲ್ ವುಡ್ ಗೆ ಸಿಎಂ ಗುಡ್ ನ್ಯೂಸ್ : ‘ವಾರ್ಷಿಕ ಚಲನಚಿತ್ರ ಪ್ರಶಸ್ತಿ’ ಪುನರಾರಂಭ

ಬೆಂಗಳೂರು : ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿರುವ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪುನರಾರಂಭಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ ಪ್ರಶಸ್ತಿಗೆ ಸಂಬಂಧಿಸಿದಂತೆ ಸಮಿತಿಗಳನ್ನು ಮಾಡಿದ್ದು, ಇವುಗಳು ವರದಿ ನೀಡಿದ ತಕ್ಷಣ ಈ ವರ್ಷದ್ದೂ ಸೇರಿದಂತೆ ಹಿಂದಿನ ವರ್ಷಗಳ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಫೆ.29 ರಿಂದ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧ ಮುಂಭಾಗದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಚಲನಚಿತ್ರೋತ್ಸವ ಉದ್ಘಾಟಿಸಿದ್ದಾರೆ. ಈ ವೇಳೆ ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular