ಬೆಂಗಳೂರು : ಬೆಂಗಳೂರಿನ ‘ರಾಮೇಶ್ವರಂ ಕಫೆ’ಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಸ್ಥಳಕ್ಕೆ ‘NIA’ ತಂಡ ದೌಡಾಯಿಸಿದೆ.
ಸ್ಥಳಕ್ಕೆ ಧಾವಿಸಿದ ಎನ್ ಐ ಎ ತಂಡ ಪರಿಶೀಲನೆ ನಡೆಸಿ ನಂತರ ಗಾಯಾಳುಗಳ ಬಗ್ಗೆ ಮಾಹಿತಿ ಪಡೆಯುತ್ತಿದೆ. ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ಭೇಟಿ ನೀಡಿದ ತಂಡ ವೈದ್ಯರ ಬಳಿ ಮಾಹಿತಿಗಳನ್ನು ಕಲೆಹಾಕುತ್ತಿದೆ.
ಇಂದಿರಾನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟಕ್ಕೆ ಒಂದೇ ಕಂಪನಿಯ ಐವರು ಸಹದ್ಯೋಗಿಗಳು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ . ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಭೀಕರ ಸ್ಫೋಟ ಸಂಭವಿಸಿದ್ದು, ಅನುಮಾನಾಸ್ಪದ ಬ್ಯಾಗ್ ನಿಂದಲೇ ಸ್ಪೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.