ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ, ನಟ ಶಿವರಾಂ ಅಂತ್ಯಕ್ರಿಯೆ ವಿಚಾರಕ್ಕೆ ನಡೆದ ಸಂಘರ್ಷಕ್ಕೆ ತೆರೆ ಬಿದ್ದಿದ್ದು, ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ನಟ ಶಿವರಾಂ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ನಟ ಶಿವರಾಮ್ ಅಂತ್ಯಕ್ರಿಯೆಯನ್ನು ಛಲವಾದಿ ಮಹಾಸಭಾಕ್ಕೆ ಸೇರಿದ ಜಾಗದಲ್ಲೇ ಅಂತ್ಯಸಂಸ್ಕಾರ ನಡೆಸಲು ಆಗ್ರಹಿಸಲಾಗಿತ್ತು, ಕೆ. ಶಿವರಾಂ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಛಲವಾದಿ ಮಹಾಸಭಾಕ್ಕೆ ಸೇರಿದ ಜಾಗದಲ್ಲೇ ನಡೆಸಲು ಅವಕಾಶ ನೀಡಬೇಕು ಎಂದು ಕುಟುಂಬದವರು ಮತ್ತು ಅಭಿಮಾನಿಗಳು ಪಟ್ಟು ಹಿಡಿದಿದ್ದರು. ಆದರೆ ಸರ್ಕಾರ ಇದಕ್ಕೆ ಒಪ್ಪದ ಹಿನ್ನೆಲೆ ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ನಟ ಶಿವರಾಂ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಮಧ್ಯಾಹ್ನ 3 ಗಂಟೆವರೆಗೆ ಬೆಂಗಳೂರಿನ ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ವೇಳೆಗೆ ಅಂತಿಮ ವಿಧಿವಿಧಾನಗಳ ಮೂಲಕ ಕೆ. ಶಿವರಾಮ್ ಅವರ ಅಂತ್ಯಕ್ರಿಯೆ ನೆರವೇರಲಿದೆ.