ಬೆಂಗಳೂರು : ಬೆಂಗಳೂರಿನಲ್ಲಿ ನೀರಿನ ಅಭಾವ ತಲೆದೂರಿದ್ದು, ಟ್ಯಾಂಕರ್ ಮಾಫಿಯಾಗೆ ಬಿಬಿಎಂಪಿ ಕಡಿವಾಣ ಹಾಕುತ್ತಿದೆ. ಈ ನಿಟ್ಟಿನಲ್ಲಿ ಮಾ. 7 ರೊಳಗೆ ಸ್ವಯಂ ನೋಂದಾಯಿಸಿಕೊಳ್ಳಲು ಬಿಬಿಎಂಪಿ ಗಡುವು ನೀಡಿದೆ.
ಬೇಸಿಗೆ ಹಿನ್ನೆಲೆ ನೀರಿನ ಅಭಾವವಿರುವ ಬೆಂಗಳೂರು ನಗರದ ಪ್ರದೇಶಗಳಲ್ಲಿ ಖಾಸಗಿ ಟ್ಯಾಂಕರ್ಗಳು ಹೆಚ್ಚಿನ ದರಕ್ಕೆ ಮಾರಾಟ ಮಾಡುವುದನ್ನು ತಡೆಯಲು ಬಿಬಿಎಂಪಿ ಕಠಿಣ ಕ್ರಮ ಕೈಗೊಂಡಿದೆ. ಮಾರ್ಚ್ 7ರೊಳಗೆ ಸ್ವಯಂ ನೋಂದಣಿ ಮಾಡಿಕೊಳ್ಳಲು ಟ್ಯಾಂಕರ್ ಮಾಲೀಕರಿಗೆ ಗಡುವು ನೀಡಿದೆ.
ಜಲಮಂಡಳಿ ಸುಪರ್ದಿಗೆ ನೀಡಲಾದ 200 ಟ್ಯಾಂಕರ್ಗಳ ಪೈಕಿ 110 ಹಳ್ಳಿಗಳು, ಪುರಸಭೆ, ನಗರಸಭೆ ವ್ಯಾಪ್ತಿಗೆ 100 ಟ್ಯಾಂಕರ್ ಮತ್ತು ನಗರದ ಕೇಂದ್ರ ಭಾಗದ ಪ್ರದೇಶಗಳಿಗೆ ನೀರು ಪೂರೈಸಲು 100 ಟ್ಯಾಂಕರ್ಗಳನ್ನು ಬಳಸಿಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.