ಬೆಂಗಳೂರು : ರಾಜಕೀಯ, ಕೃಷಿಯಲ್ಲಿ ಹೆಸರು ಮಾಡಿರುವ ಹಾಸನ ಜಿಲ್ಲೆ, ಶಿಕ್ಷಣ ಕ್ಷೇತ್ರದ ಉತ್ತಮ ಬೆಳವಣಿಗೆಯಿಂದ ರಾಜ್ಯಕ್ಕೆ ಮಾದರಿಯಾಗಿದೆ. ಇಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಸಬೇಕೆಂಬುದು ನಮ್ಮ ಸಂಕಲ್ಪವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಹಾಸನದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಇಂದು ಹಮ್ಮಿಕೊಂಡಿದ್ದ ನಾನಾ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಸಮಾರಂಭ ಹಾಗೂ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳೊಂದಿಗೆ ಉದ್ಘಾಟಿಸಿ ಮಾತನಾಡಿದರು.
ತಾಯಿ ಶ್ರೀ ಹಾಸನಾಂಬೆ ನೆಲೆಸಿರುವ ಪುಣ್ಯಭೂಮಿಯಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿರುವುದು ಸಾರ್ಥಕತೆ ಮೂಡಿಸಿದೆ. ರಾಜಕೀಯ, ಕೃಷಿಯಲ್ಲಿ ಹೆಸರು ಮಾಡಿರುವ ಹಾಸನ ಜಿಲ್ಲೆ, ಶಿಕ್ಷಣ ಕ್ಷೇತ್ರದ ಉತ್ತಮ ಬೆಳವಣಿಗೆಯಿಂದ ರಾಜ್ಯಕ್ಕೆ ಮಾದರಿಯಾಗಿದೆ. ಇಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಸಬೇಕೆಂಬುದು ನಮ್ಮ ಸಂಕಲ್ಪ. ಹಾಗೆಯೇ ಈ ಜಿಲ್ಲೆಯಲ್ಲಿನ ಹಲವು ಬೇಡಿಕೆಗಳನ್ನು ಈಡೇರಿಸುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಿದೆ. ರಾಜಕೀಯ, ಕೃಷಿಯಲ್ಲಿ ಹೆಸರು ಮಾಡಿರುವ ಹಾಸನ ಜಿಲ್ಲೆ, ಶಿಕ್ಷಣ ಕ್ಷೇತ್ರದ ಉತ್ತಮ ಬೆಳವಣಿಗೆಯಿಂದ ರಾಜ್ಯಕ್ಕೆ ಮಾದರಿಯಾಗಿದೆ. ಇಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಸಬೇಕೆಂಬುದು ನಮ್ಮ ಸಂಕಲ್ಪವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಎತ್ತಿನಹೊಳೆ ಯೋಜನೆಯ ಮೂಲಕ ರೈತರ ನೀರಿನ ಸಮಸ್ಯೆಯನ್ನು ನಿವಾರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಜನಪರ ಗ್ಯಾರಂಟಿಗಳು ರಾಜ್ಯದ ಜನರ ಜೀವನ ಮಟ್ಟವನ್ನು ಸುಧಾರಿಸಿದ್ದು, ಕರ್ನಾಟಕ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ತಿಳಿಸಿದರು.