HomeKarnatakaಅಲ್ಪಸಂಖ್ಯಾತರ ಓಲೈಕೆ ಪರಿಣಾಮವೇ ಈ ಸ್ಪೋಟ: ಸರ್ಕಾರದಿಂದ FSL ವರದಿ ಮುಚ್ಚಿಡುವ ಯತ್ನ: ವಿಜಯೇಂದ್ರ, ಅಶೋಕ್...

ಅಲ್ಪಸಂಖ್ಯಾತರ ಓಲೈಕೆ ಪರಿಣಾಮವೇ ಈ ಸ್ಪೋಟ: ಸರ್ಕಾರದಿಂದ FSL ವರದಿ ಮುಚ್ಚಿಡುವ ಯತ್ನ: ವಿಜಯೇಂದ್ರ, ಅಶೋಕ್ ವಾಗ್ದಾಳಿ

ಬೆಂಗಳೂರು: ಅಲ್ಪಸಂಖ್ಯಾತರ ಓಲೈಕೆಯ ಪರಿಣಾಮವೇ ಈ ಬ್ಲಾಸ್ಟ್ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಉಭಯ ನಾಯಕರು, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಅಲ್ಪ ಸಂಖ್ಯಾತರ ಓಲೈಕೆಯ ಪರಿಣಾಮದಿಂದ ಈ ಸ್ಫೋಟ ನಡೆದಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬೆನ್ನಲ್ಲೇ ಅದರ ಮುಂದುವರೆದ ಭಾಗವಾಗಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿದ್ದು, ಪಾಕಿಸ್ತಾನ ಜಿಂದಾಬಾದ್ ಘೋಷಣೆ ವರದಿ ಮುಚ್ಚಿಡುವ ಯತ್ನ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ಕಳೆದ ಎರಡು ದಿನದಲ್ಲಿ ಕಲಬುರ್ಗಿಯಲ್ಲಿ ಇಬ್ಬರ ಹತ್ಯೆ ನಡೆದಿದೆ. ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ಮಾಡಲಾಗಿದೆ. ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular