ಹಾಸನ : ಜಾತಿ ಗಣತಿ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಜಾತಿ ಗಣತಿ ವರದಿಯನ್ನು ಸಲ್ಲಿಸಿದ್ದು, ನಾವು ವರದಿಯನ್ನು ಸ್ವೀಕರಿಸಿದ್ದೇವೆ. ಆ ವರದಿಯಲ್ಲೇನಿದೆ ಎಂಬ ಕುರಿತು ಸಚಿವ ಸಂಪುಟದಲ್ಲಿ ವಿಸ್ತೃತವಾಗಿ ಚರ್ಚೆ ಮಾಡಿ ತೀರ್ಮಾನಿಸುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಿಜೆಪಿ ಯತ್ನಿಸುತ್ತಿದೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ರೂ. ಆಮಿಷ ಒಡ್ಡಿದೆ. ಕಾಂಗ್ರೆಸ್‌ನ ಒಬ್ಬೊಬ್ಬ ಶಾಸಕರಿಗೆ ಬಿಜೆಪಿ 50 ಕೋಟಿ ರೂ. ಆಫರ್ ಮಾಡಿದೆ ಎಂದು ಆರೋಪಿಸಿದ್ದಾರೆ.