![](https://kannadadunia.com/wp-content/uploads/2021/04/kpsc-1591497904.jpg)
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭೂಮಾಪನ, ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ 364 ಭೂಮಾಪಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಎರಡು ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಿದೆ.
ಗ್ರೂಪ್ ಸಿ ಉಳಿಕೆ ಮೂಲ ವೃಂದದ 264 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ 100 ಹುದ್ದೆಗಳನೇಮಕಾತಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗಿದೆ. ಮಾ.11ರಿಂದ ಏ.10ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಜುಲೈ 20ರಂದು ಭಾಷಾ ಪರೀಕ್ಷೆ ಮತ್ತು ಜುಲೈ 21ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಗುರಿಯೊಂದಿಗೆ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿಯನ್ನು ಕೆಪಿಎಸ್ಸಿ ಪ್ರಕಟಿಸಿದೆ. https://kpsconline.karnataka.gov.in ಗೆ ಭೇಟಿ ನೀಡಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.