ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೆಚ್ ಎ ಎಲ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 307 , 471 ಮತ್ತು ಯುಎಪಿಯ 16 (ಭಯೋತ್ಪಾದಕ ಕೃತ್ಯ), 18 (ಪಿತೂರಿ) ಹಾಗೂ 38 (ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಅಪರಾಧ) ಮತ್ತು ಎಕ್ಸ್ಪ್ಲೋಸಿವ್ ಸಬ್ಸ್ಟೆನ್ಸ್ ಆ್ಯಕ್ಟ್ 3 (ಜೀವಕ್ಕೆ ಅಥವಾ ಆಸ್ತಿಗೆ ಅಪಾಯನ್ನುಂಟುಮಾಡುವ ಸ್ಫೋಟ) ಮತ್ತು 4 (ಜೀವಕ್ಕೆ ಹಾನಿಯುಂಟುಮಾಡುವ ಉದ್ದೇಶದಿಂದ ಸ್ಫೋಟಕ ತಯಾರಿಕೆ) ಸೆಕ್ಷನ್ ಅಡಿಯಲ್ಲಿ FIR ದಾಖಲಾಗಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ವಿವಿಧ ತನಿಖಾ ತಂಡಗಳು ಘಟನಾ ಸ್ಥಳಕ್ಕ ಭೇಟಿ ನೀಡಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ತಡರಾತ್ರಿಯವರೆಗೂ ಕೇಂದ್ರ ಗುಪ್ತಚರ ಇಲಾಖೆ ಭೇಟಿ ನೀಡಿದ್ದು ತೀವ್ರ ಶೋಧ ನಡೆಸುತ್ತಿದೆ. ಎಫ್ಎಸ್ಎಲ್, ಸೊಕೋ ಟೀಮ್, ಬಾಂಬ್ ಸ್ಕ್ವಾಡ್ ನಿಂದಲೂ ಶೋಧ ನಡೆಯುತ್ತಿದೆ.