alex Certify ‘ರಾಮೇಶ್ವರಂ ಕೆಫೆ ಬ್ಲಾಸ್ಟ್’ ಗೂ ‘ಮಂಗಳೂರು ಕುಕ್ಕರ್ ಬ್ಲಾಸ್ಟ್’ ಗೂ ಸಂಬಂಧ ಇಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಮೇಶ್ವರಂ ಕೆಫೆ ಬ್ಲಾಸ್ಟ್’ ಗೂ ‘ಮಂಗಳೂರು ಕುಕ್ಕರ್ ಬ್ಲಾಸ್ಟ್’ ಗೂ ಸಂಬಂಧ ಇಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ ಗೂ ಮಂಗಳೂರು ಕುಕ್ಕರ್ ಬ್ಲಾಸ್ಟ್ ಗೂ ಸಂಬಂಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹಾಗೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಬ್ಲಾಸ್ಟ್ ಪ್ರಕರಣಗಳು ಅಲ್ಪಸಂಖ್ಯಾತರ ಓಲೈಕೆಗಾಗಿ ನಡೆದಿದ್ದೇ ಎಂದು ಖಡಕ್ ಆಗಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ ಗೂ ಮಂಗಳೂರು ಕುಕ್ಕರ್ ಬ್ಲಾಸ್ಟ್ ಗೂ ಸಂಬಂಧ ಇಲ್ಲ . ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ತನಿಖೆಯಲ್ಲಿ ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿದೆ ಎಂದು ತಿಳಿದುಬಂದಿದೆ ಎಂದರು.

ಪೂರ್ಣ ವರದಿ ಬಂದ ನಂತರ ಇನ್ನಷ್ಟು ಮಾಹಿತಿ ಸಿಗಲಿದೆ. ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು ಬಂದಿದ್ದಾನೆ ಎಂಬ ಮಾಹಿತಿ ದೊರೆತಿದೆ. ಘಟನೆಯಲ್ಲಿ ಸುಮಾರು ಎಂಟು ಜನರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜ್ಯದಲ್ಲಿ ಇಂಥ ಘಟನೆ ನಡೆಯಬಾರದಿತ್ತು. ಮಂಗಳೂರಿನಲ್ಲಿ ಆಗಿದ್ದು ಬಿಟ್ಟರೆ ಪುನ: ಅಂತಹ ಘಟನೆ ಸಂಭವಿಸಿದೆ. ಯಾರು ಇದನ್ನು ಮಾಡಿದ್ದಾರೆ ಎಂದು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...