ಇಂದು ವುಮೆನ್ಸ್ ಪ್ರೀಮಿಯರ್ ಲೀಗ್ ನ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯವನ್ನು ವೀಕ್ಷಿಸಲು ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.
ಮಹಿಳಾ ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿಯರಾದ ಸ್ಮೃತಿ ಮಂಧಾನ ಮತ್ತು ಹರ್ಮನ್‌ಪ್ರೀತ್ ಕೌರ್ ಈ ಇಬ್ಬರಲ್ಲಿ ಯಾರಿಗೆ ಜಯ ಸಿಗಲಿದೆ ಎಂಬುದನ್ನು ಇಂದು ಕಾದು ನೋಡಬೇಕಾಗಿದೆ. ಎರಡು ತಂಡಗಳು ಆಡಿರುವ ಮೂರು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ಸೋಲು ಕಂಡಿವೆ.
ಐಪಿಎಲ್ ನಲ್ಲಿ ಆರ್ ಸಿ ಬಿ ಮತ್ತು ಮುಂಬೈ ಇಂಡಿಯನ್ಸ್ ಮುಖಮುಖಿಯಾದರೆ ಜಿದ್ದಾಜಿದ್ದಿ ಹೋರಾಟ ಇದ್ದೇ ಇರುತ್ತದೆ. ಅದೇ ರೀತಿ ಮಹಿಳಾ ಕ್ರಿಕೆಟ್ ಲೀಗ್ ನಲ್ಲೂ ಈ ಎರಡು ತಂಡಗಳು ಬಲಿಷ್ಠವಾಗಿದ್ದು, ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಂದ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಸಿಗಲಿದೆ.