ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ನಡೆದ ಹಿನ್ನೆಲೆ ಮೆಜೆಸ್ಟಿಕ್ ಹಾಗೂ ಏರ್ ಪೋರ್ಟ್ ಸುತ್ತಾಮುತ್ತಾ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಸಿಐಎಸ್ಎಫ್ ಸಿಬ್ಬಂದಿ ನಿಗಾ ವಹಿಸಿದ್ದು, ಪ್ರತಿ ಪ್ರಯಾಣಿಕರ ಬ್ಯಾಗ್ ನ್ನು ಚೆಕ್ ಮಾಡಿ ಒಳಗೆ ಬಿಡುತ್ತಿದ್ದಾರೆ. ದೇಶ ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಕಣ್ಣಿಟ್ಟಿದ್ದಾರೆ.
ಅದೇ ರೀತಿ ಮೆಜೆಸ್ಟಿಕ್ ನಲ್ಲಿ ಕೂಡ ಬಿಗಿ ಭದ್ರತೆ ಒದಗಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಹೋಂ ಗಾರ್ಡ್ ಗಳನ್ನು ನಿಯೋಜನೆ ಮಾಡಲಾಗಿದೆ. ಅನುಮಾನಾಸ್ಪದ ವ್ಯಕ್ತಿ ಹಾಗೂ ಬ್ಯಾಗ್ ಗಳನ್ನು ತಪಾಸಣೆ ಮಾಡಲಾಗುತ್ತಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಗುರುವಾರ ಸಂಭವಿಸಿದ ಬಾಂಬ್ ಸ್ಫೋಟದ ಬಗ್ಗೆ ವಿಧಿವಿಜ್ಞಾನ ಪ್ರಯೋಗಾಲಯ, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದ ತಂಡ ಶುಕ್ರವಾರ ತನಿಖೆ ನಡೆಸಿತು. ಸ್ಫೋಟದಲ್ಲಿ 10 ಜನರು ಗಾಯಗೊಂಡಿದ್ದಾರೆ. ಮಧ್ಯಾಹ್ನ 1 ಗಂಟೆಗೆ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದೆ.