ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ನಲ್ಲಿ ಗಾಯಗೊಂಡ ಎಲ್ಲಾ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡವರು ನಗರದ ಬ್ರೂಕ್ ಫೀಲ್ಡ್ ಹಾಗೂ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಎಲ್ಲಾ ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ. ಎಲ್ಲಾ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಿ ಎಂದು ವೈದ್ಯರಿಗೆ ಸಲಹೆ ನೀಡಿದ್ದೇನೆ. ಗಾಯಾಳುಗಳ ಜೊತೆ ನಾನು ಮಾತನಾಡಿದ್ದೇನೆ, ಎರಡು ಮೂರು ದಿನಗಳಲ್ಲಿ ಗುಣಮುಖರಾಗುತ್ತಾರೆ. ಈಗಾಗಲೇ ಇಬ್ಬರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೇಳಿದರು.