ಬೆಂಗಳೂರು : ಬೆಂಗಳೂರಿನ ‘ರಾಮೇಶ್ವರಂ ಕೆಫೆ’ಯಲ್ಲಿ ಸ್ಪೋಟಕ್ಕೂ ಮುನ್ನ ನಿರ್ಜನ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ನಡೆದಿದೆ ಎಂಬ ಸ್ಪೋಟಕ ಮಾಹಿತಿ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.
ಕೆಫೆಯಲ್ಲಿ ಸ್ಪೋಟ ನಡೆಸುವ ಮುನ್ನ ನಿರ್ಜನ ಪ್ರದೇಶದಲ್ಲಿ ಶಂಕಿತರು ಟ್ರಯಲ್ ಬ್ಲಾಸ್ಟ್ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿರ್ಜನ ಪ್ರದೇಶ, ಕಾಡಿನಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಿದ ಅನುಮಾನ ವ್ಯಕ್ತವಾಗಿದೆ. ಅತ್ಯಾಧುನಿಕ ಟೈಮರ್, ತಂತಿ, ಡಿಟೊನೇಟರ್ ಬಳಸಿ ಸ್ಫೋಟ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ತನಿಖೆ ಚುರುಕಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ .
ರಾಮೇಶ್ವರಂ ಕೆಫೆ ‘ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ‘ಸಿಸಿಬಿ’ ಹೆಗಲಿಗೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದ್ದು, ತನಿಖೆ ಚುರುಕಾಗಿ ನಡೆಯುತ್ತಿದೆ.