HomeKarnatakaBIG NEWS: ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್ ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್

BIG NEWS: ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್ ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರಿನ ನೀರಿನ ಅಭಾವ ನೀಗಿಸಲು ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಆಹಾಕಾರ ಎದುರಾಗಿದೆ. ಪ್ರತಿನಿತ್ಯ ಬಿಡಬ್ಲ್ಯೂಎಸ್ಎಸ್ ಬಿ ಹಾಗೂ ಪಾಲಿಕೆ ಅಧಿಕಾರಿಗಳು ಸಭೆ ಮಾಡುತ್ತಿದ್ದಾರೆ. ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾ.7 ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದರು.

ಕೊಳವೆ ಬಾವಿಗಳ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ನೀಗಿಸಲಾಗುವುದು. ಈ ವಿಚಾರವಾಗಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಇನ್ನು ನನ್ನ ಇಲಾಖೆ ಅನುದಾನದಿಂದ ಬೆಂಗಳೂರಿನ ಎಲ್ಲಾ ಕ್ಷೇತ್ರಗಳ ಕುಡಿಯುವ ನೀರಿನ ಪೂರೈಕೆಗೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular