alex Certify Be Alert : ‘ರಾಮೇಶ್ವರಂ ಕೆಫೆ’ಯಲ್ಲಿ ಸ್ಪೋಟ : ಬೆಂಗಳೂರಿಗರೇ ಸಂಶಯ ಬಂದ್ರೆ ಈ ಸಂಖ್ಯೆಗೆ ಕರೆ ಮಾಡಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Be Alert : ‘ರಾಮೇಶ್ವರಂ ಕೆಫೆ’ಯಲ್ಲಿ ಸ್ಪೋಟ : ಬೆಂಗಳೂರಿಗರೇ ಸಂಶಯ ಬಂದ್ರೆ ಈ ಸಂಖ್ಯೆಗೆ ಕರೆ ಮಾಡಿ.!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ ನಡೆದ ಬಳಿಕ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಬೆಂಗಳೂರು ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಬೆಂಗಳೂರಿಗರೇ ಸಂಶಯ ಬಂದರೆ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರಿನ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ ನಡೆದ ಬಳಿಕ ಬೆಂಗಳೂರಿನಲ್ಲಿ ಆತಂಕ ಮನೆ ಮಾಡಿದೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಟ್ವೀಟ್ ಮಾಡಿ ಮನವಿಯೊಂದನ್ನು ಮಾಡಿದೆ.
ಆತ್ಮೀಯ ನಾಗರೀಕರೇ, ಆತಂಕ ಪಡುವ ಅಗತ್ಯವಿಲ್ಲ!! ನೀವು ಯಾವುದೇ ಅನುಮಾನಾಸ್ಪದ ವ್ಯಕ್ತಿ, ವಸ್ತು ಅಥವಾ ಚಟುವಟಿಕೆಗಳನ್ನು ಗಮನಿಸಿದರೆ, ಕೂಡಲೇ ನಮ್ಮ #112 ಗೆ ಕರೆ ಮಾಡಿ. ನಾವು ನಿಮ್ಮನ್ನು ತ್ವರಿತವಾಗಿ ತಲುಪುತ್ತೇವೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಟ್ವೀಟ್ ಮಾಡಿದೆ.

ಅದೇ ರೀತಿ ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಮಾಧ್ಯಮದವರು ಸಹಕರಿಸಬೇಕಾಗಿ ಕೋಡುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.

 

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...