HomeKarnatakaಪೋಷಕರೇ ಗಮನಿಸಿ : ಇಂದು 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ

ಪೋಷಕರೇ ಗಮನಿಸಿ : ಇಂದು 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ

ಬೆಂಗಳೂರು : ಮಾ.3 ರ ಇಂದು ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು 0 ಯಿಂದ 5 ವರ್ಷದ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಸೂಚನೆ ನೀಡಲಾಗಿದೆ.

0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಮಾ.3 ರಂದು ಪುನಃ ಪೋಲಿಯೋ ಹಾಕಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅತೀ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲ್ಪಟ್ಟ ಕೊಳಚೆ ಪ್ರದೇಶ, ಅಲೆಮಾರಿ ಜನಾಂಗ, ಇಟ್ಟಿಗೆ ಭಟ್ಟಿಗಳು ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಪ್ರದೇಶಗಳನ್ನೊಂಡು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳು ಸೇರಿದಂತೆ ಲಸಿಕಾ ಬೂತ್‍ಗಳಲ್ಲಿ ಲಸಿಕೆ ಹಾಕಲಾಗುವುದು.

   ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ವ್ಯಾಕ್ಸಿನೇಟರ್‍ಗಳಾಗಿ ಕಾರ್ಯ ನಿರ್ವಹಿಸುತ್ತಾರೆ.

   ಶಾಲೆಗಳಲ್ಲಿ ಲಸಿಕಾ ಬೂತ್‍ಗಳನ್ನು ತೆರೆಯಲಾಗುತ್ತದೆ. ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಮಾ.3 ರಂದು ಭಾನುವಾರ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‍ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು ಉಚಿತವಾಗಿ ನಿಡಲಾಗುವುದು. ಸಾರ್ವಜನಿಕರು ಈ ಲಸಿಕಾ ಬೂತ್‍ಗಳಿಗೆ ತಮ್ಮ 0 ಯಿಂದ 5 ವರ್ಷದ ಮಕ್ಕಳನ್ನು ಕರೆತಂದು ಪೋಲಿಯೋ ಲಸಿಕೆ ಹಾಕಿಸುವಂತೆ ಕೋರಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular