![](https://kannadadunia.com/wp-content/uploads/2024/03/RTC.jpg)
ಬೆಂಗಳೂರು : ಗ್ರಾಮ ಲೆಕ್ಕಿಗರ ಮನೆ ಬಾಗಿಲಿಗೆ ತೆರಳಿ ಆರ್‌ಟಿಸಿ-ಆಧಾರ್ ಜೋಡಣೆ ಕೆಲಸದಲ್ಲಿ ತೊಡಗಿದ್ದಾರೆ. 88 ಸಾವಿರ ಆರ್‌ಟಿಸಿಗಳಲ್ಲಿ ಕೃಷಿ ಭೂಮಿ ಇರುವುದು ಕಂಡುಬಂದಿದೆ. ಆಧಾರ್ ಲಿಂಕ್ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬಾಕಿ ಪೋಡಿ ಹಾಗೂ ದುರಸ್ತಿ ಪ್ರಕರಣ ಇತ್ಯರ್ಥಕ್ಕೆ ಮೊದಲು ನಿಖರವಾದ ಆಕಾರ್ ಬಂದ್ ಮಾಹಿತಿ ಪಡೆಯಬೇಕು. ನಿಖರವಾದ ಆಕಾರ್ ಬಂದ್ ಇಲ್ಲದೇ ಆರ್‌ಟಿಸಿ ಜೊತೆಗೆ ಜೋಡಣೆ ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳಿಗೆ ಮುಂದಿನ 2 ತಿಂಗಳಲ್ಲಿ 65 ಲಕ್ಷ ಆಕಾರ್ ಬಂದ್ ಡಿಜಿಟಲೀಕರಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಆರ್ ಟಿಸಿ-ಆಧಾರ್ ಜೋಡಣೆ ಕೆಲಸ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದ್ದು, ಈವರೆಗೆ ೧೫ ಲಕ್ಷ ಆರ್ ಟಿಸಿ ಮಾಲೀಕರನ್ನು ಸಂಪರ್ಕಿಸಲಾಗಿದೆ. ಮುಂದಿನ ಎರಡು-ಮೂರು ತಿಂಗಳಲ್ಲಿ ಎಲ್ಲ ಆರ್ ಟಿಸಿ ಮಾಲೀಕರನ್ನು ತಲುಪಲು ರೂಪುರೇಷೆ ಸಿದ್ದಪಡಿಸಲಾಗಿದೆ ಎಂದು ಹೇಳಿದ್ದಾರೆ.