HomeKarnatakaBREAKING : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಪ್ರಕರಣ : ಶೀಘ್ರವೇ ಆರೋಪಿ ಬಂಧನ...

BREAKING : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಪ್ರಕರಣ : ಶೀಘ್ರವೇ ಆರೋಪಿ ಬಂಧನ : ಗೃಹ ಸಚಿವ ಡಾ.ಜಿ.ಪರಮೇಶ್ವರ್

‌ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲಿ ಬಾಂಬ್‌ ಸ್ಪೋಟ ಪ್ರಕರಣದ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೆಶ್ವರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣದ ಆರೋಪಿಯನ್ನು ಬಂಧಿಸಲು ಎಂಟು ತಂಡ ರಚಿಸಲಾಗಿದ್ದು, ಶೀಘ್ರವೇ ಆರೋಪಿಯನ್ನು ಬಂಧಿಸಲಾಗುತ್ತದೆ. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೆಫೆ ಬಾಂಬ್‌ ಸ್ಪೋಟದ ಆರಫಿ ಪತ್ತೆಗಾಗಿ ಈಗಾಗಲೇ ಎಂಟು ತಂಡ ರಚನೆ ಮಾಡಲಾಗುತ್ತಿದ್ದು, ಎನ್‌ ಐಎ, ಐಬಿ, ಎನ್‌ ಎಸ್‌ ಜಿ ಪಡೆ ಕೂಡ ಸಹಕಾರ ನೀಡಿದೆ. ಹಲವು ತನಿಖಾ ಸಂಸ್ಥೆಗಳು ಘಟನಾ ಸ್ಥಳ ಪರಿಶೀಲನೆ ನಡೆಸಿವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular