ಬೆಂಗಳೂರು : ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಬಾಂಬ್ ಸ್ಪೋಟದ ತನಿಖೆ ನಡೆಯುತ್ತಿದ್ದು, ಇದೀಗ ಗೃಹ ಸಚಿವ ಜಿ. ಪರಮೇಶ್ವರ್ ಇಂದು ಮಹತ್ವದ ಸಭೆ ಕರೆದಿದ್ದಾರೆ.
ಇಂದು 11:30 ಕ್ಕೆ ಸಭೆ ನಗರ ಪೊಲೀಸ್ ಕಮಿಷನರ್ ದಯಾನಂದ್ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಭೆ ಬಳಿಕ ಕೆಲವು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ ನಡೆದ ಬಳಿಕ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಬೆಂಗಳೂರು ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.