ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕೇಂಜ ಚೇತನ್ ಕುಮಾರ್ ನಿರ್ದೇಶನದ ‘ಚೌ ಚೌ ಬಾತ್’ ಚಿತ್ರದ ಮೆಲೋಡಿ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ, ‘ಇರಲಿ ಹೇಗೆ’ ಎಂಬ ಈ ಹಾಡಿಗೆ ಚೇತನ್ ನಾಯಕ್ ಧ್ವನಿಯಾಗಿದ್ದು, ಹೇಮಂತ್ ಜೋಯಿಸ್ ಸಂಗೀತ ಸಂಯೋಜನೆ ನೀಡಿದ್ದಾರೆ. ಪ್ರಮೋದ್ ಮರವಂತೆ ಅವರ ಸಾಹಿತ್ಯವಿದೆ.
ಈ ಚಿತ್ರದಲ್ಲಿ ಸಾಗರ್ ಗೌಡ, ಸಂಕಲ್ಪ್ ಶರ್ಮಾ, ಸುಶ್ಮಿತಾ ಭಟ್, ಅರುಣ ಬಾಲರಾಜ್, ಗೀತಾ ಬಂಗೇರ, ಪ್ರಕರ್ಷ ಶಾಸ್ತ್ರಿ, ಧನುಶ್ ಬೈಕಂಪಾಡಿ, ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದು, ಹಾರಿಜಾನ್ ಮೂವೀಸ್ ನಿರ್ಮಾಣ ಮಾಡಿದೆ, ನಿರ್ದೇಶಕ ಕೆಂಜ ಚೇತನ್ ಕುಮಾರ್ ಅವರ ಸಂಕಲನ, ರುದ್ರಮುನಿ ಬೆಳಗೆರೆ ಛಾಯಾಗ್ರಹಣವಿದೆ.