![](https://kannadadunia.com/wp-content/uploads/2024/03/WhatsApp-Image-2024-03-03-at-11.37.43-AM.jpeg)
ಹೊಸಪೇಟೆ : ಸಿಎಂ ಸಿದ್ದರಾಮಯ್ಯ ಅವರು ಹೊಸಪೇಟೆಯ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿದರು.
ಹೊಸಪೇಟೆ ತಾಲೂಕಿನ ಕಮಲಾಪುರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ವೇಳೆ ಸಚಿವ ನಾಗೇಂದ್ರ, ಶಾಸಕ ಗವಿಸಿದ್ದಪ್ಪ ಸಾಥ್ ನೀಡಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣವನ್ನು ಸಿಸಿಬಿ ಸಮರ್ಥವಾಗಿ ತನಿಖೆ ನಡೆಸುತ್ತಿದೆ. ಪ್ರಕರಣ ಸಂಬಂಧ ನಿನ್ನೆಯವರೆಗೂ ಯಾರನ್ನೂ ಬಂಧಿಸಿಲ್ಲ. ಇನ್ನೂ ಎರಡ್ಮೂರು ದಿನಗಳಲ್ಲಿ ಆರೋಪಿಯನ್ನು ಬಂಧಿಸಿಸುತ್ತೇವೆ ಎಂದು ತಿಳಿಸಿದ್ದಾರೆ.