ಉಡುಪಿ: ಮನೆಯಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘೋರ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೃಷ್ಣ (36) ಕೊಲೆಯಾದ ದುರ್ದೈವಿ. ಕೊಲೆಯಾಗಿರುವ ಕೃಷ್ಣ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಮಣಿಪಾಲದಲ್ಲಿ ಕೆಲಸ ಮಡಿಕೊಂಡು ಜೀವನ ಸಾಗಿಸುತ್ತಿದ್ದರು. ನಿನ್ನೆ ರಾತ್ರಿ 9:30ರ ಸುಮಾರಿಗೆ ಮನೆಯಲ್ಲಿ ಊಟ ಮಾಡುತ್ತಿದ್ದ ಕೃಷ್ಣ ಅವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಊಟಕ್ಕೆ ಕುಳಿತಿದ್ದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ಘಾಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀದಿ ಪರಿಶೀಲನೆ ನಡೆಸಿದ್ದಾರೆ.