ಬೆಂಗಳೂರು : ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ ಜಾಡು ಪತ್ತೆ ಹಚ್ಚಲು ಪೊಲೀಸರು BMRCL ಮೊರೆ ಹೋಗಿದ್ದಾರೆ.
ಬೆಂಗಳೂರಿನ ಎಲ್ಲಾ ಮೆಟ್ರೋ ಸ್ಟೇಷನ್ ನಲ್ಲಿ ಪೊಲೀಸರು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಬಿಎಂಟಿಸಿಯಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕುಂದಲಹಳ್ಳಿ, ಹೂಡಿ, ಸೀತಾರಾಮ ಪಾಳ್ಯ, ಮೆಟ್ರೋ ಸ್ಟೇಷನ್ ಮುಂಭಾಗದ ದೃಶ್ಯಾವಳಿಗಳನ್ನು ಪೊಲೀಸರು ಪಡೆದುಕೊಂಡಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲಿ ಬಾಂಬ್ ಸ್ಪೋಟ ಪ್ರಕರಣದ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೆಶ್ವರ್ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.