ಗದಗ : ಕಳ್ಳರು ಅಕ್ಕಿ ಕದ್ದು ನಂತರ ಪೊಲೀಸ್ ಸಿಬ್ಬಂದಿ ಮೇಲೆಯೇ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗದಗದ ಲಕ್ಷ್ಮೇ಼ಶ್ವರ ತಾಲೂಕಿನ ರಾಮಗಿರಿ ಚೆಕ್ ಪೋಸ್ಟ್ ಬಳಿ ನಡೆದಿದೆ.
ಪೇದೆ ಹೆಚ್ ಎನ್ ಗೊರವರ್ ಎಂಬುವವರು ಹಲ್ಲೆಗೊಳಗಾಗಿದ್ದು, ಕರ್ತವ್ಯ ನಿರತ ಪೇದೆ ಮೇಲೆ ಕಳ್ಳರು ಹಲ್ಲೆ ನಡೆಸಿದ್ದಾರೆ. ಚೆಕ್ ಪೋಸ್ಟ್ ನಲ್ಲಿ ವಾಹನ ತಡೆದು ತಪಾಸಣೆ ನಡೆಸಿದಾಗ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಕಳ್ಳರು ಹಲ್ಲೆ ನಡೆಸಿದ್ದಾರೆ. ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಒಬ್ಬರೇ ಕರ್ತವ್ಯ ನಿರ್ವಹಿಸುತ್ತಿದ್ದು, ಸಮವಸ್ತ್ರ ಹರಿದು ಹಲ್ಲೆ ನಡೆಸಿ ಕಳ್ಳರು ಎಸ್ಕೇಪ್ ಆಗಿದ್ದಾರೆ.