ಮಂಗಳೂರು : ಕೊಂಡಾಣ ಕ್ಷೇತ್ರದ ಭಂಡಾರ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮುತ್ತಣ್ಣ ಶೆಟ್ಟಿ, ಧೀರಜ್, ಶಿವರಾಜ್ ಎಂದು ಗುರುತಿಸಲಾಗಿದೆ. ಮೂವರು ಆರೋಪಿಗಳನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರಸಿದ್ಧ ಕೊಂಡಾಣ ಕ್ಷೇತ್ರದ ದೈವಸ್ಥಾನದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದೆ. ನಿರ್ಮಾಣ ಹಂತದ ಭಂಡಾರ ಮನೆಯನ್ನು ರಾತ್ರೋರಾತ್ರಿ ಜೆಸಿಬಿ ಮೂಲಕ ಧ್ವಂಸಗೊಳಿಸಲಾಗಿದೆ. ಪಿಲಿಚಾಮುಂಡಿ, ಬಂಟ, ವೈದ್ಯನಾಥ ದೇವಸ್ಥಾನಕ್ಕೆ ಸೇರಿದ ಭಂಡಾರಗಳನ್ನು ಇಡಲು ನೂತನವಾಗಿ ಕಟ್ಟಡ ನಿರ್ಮಿಸಲಾಗುತ್ತಿತ್ತು. ಆದರೆ ಈಗ ಏಕಾಏಕಿ ನಿರ್ಮಾಣ ಹಂತದ ಮನೆಯನ್ನೇ ಕೆಡವಲಾಗಿದೆ.ದೈವಸ್ಥಾನದ ಆಡಳಿತ ಮಂಡಳಿ ವಿಚಾರವಾಗಿ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿತ್ತು. ಇದೇ ವಿಚಾರವಾಗಿ ಭಂಡಾರ ಮನೆ ಧ್ವಂಸ ಮಾಡಿರುವ ಶಂಕೆ ವ್ಯಕ್ತವಾಗಿದೆ.