ಬೆಂಗಳೂರು : ರಾಜ್ಯ ಸರಕಾರಿ ನೌಕರರಿಗೆ ಈಗ ಇರುವ ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವುದು ಖಚಿತ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ , ಹಳೆ ಪಿಂಚಣಿ ಯೋಜನೆ ಜಾರಿ ಮತ್ತು 7ನೇ ವೇತನ ಆಯೋಗದ ವರದಿ ಜಾರಿ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ಭರವಸೆ ನೀಡಿದ್ದಾರೆ.ಈ ಬಗ್ಗೆ ಯಾವುದೇ ಅನುಮಾನ ಬೇಡ, ಈಗ ಇರುವ ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವುದು ಖಚಿತ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಒಳ್ಳೆಯ ಉದ್ದೇಶ ಮತ್ತು ಗುರಿ ಇಟ್ಟುಕೊಂಡು ನೌಕರರ ಸಂಘ ಕೆಲಸ ಮಾಡಬೇಕು. ಸಂಘಟನೆಯಲ್ಲಿ ರಾಜಕೀಯ ತರಬೇಡಿ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲರನ್ನೂ ವಿಕಾಸಕ್ಕಾಗಿ ಒಟ್ಟಾಗಿ ಕೆಲಸ ಮಾಡೋಣ ಎಂದರು.