ಬೆಂಗಳೂರು : ಮಳೆ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಮುಂದಿನ 2 ವಾರ ಭರ್ಜರಿ ಮಳೆ ಮುನ್ಸೂಚನೆಯಾಗುವ ನಿರೀಕ್ಷೆಯಿದೆ.
ರಾಜ್ಯದಲ್ಲಿ ಬಿಸಿಲಿನ ಧಗೆಗೆ ಜನರು ಕಂಗೆಟ್ಟಿದ್ದು, ಕೆರೆ ಕಟ್ಟೆಗಳು ಬತ್ತಿ ಹೋಗಿದೆ. ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಹವಾಮಾನ ಇಲಾಖೆ ಪ್ರಕಾರ ಕರ್ನಾಟಕದಲ್ಲಿ ಮುಂದಿನ ಕೆಲ ದಿನದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಮಾರ್ಚ್ ತಿಂಗಳ ಮೊದಲ 10 ದಿನ ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಚಿಕ್ಕಮಗಳೂರು, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ನೀರಿನ ಸಮಸ್ಯೆ ತಲೆದೂರಿದ್ದು, ರಾಜ್ಯದ ಗ್ರಾಮೀಣ, ನಗರ ಪ್ರದೇಶದಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ಟ್ಯಾಂಕರ್ ಮತ್ತು ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗಿದೆ. ಬರಗಾಲದ ಪರಿಸ್ಥಿತಿಯಿಂದ ಮಾರ್ಚ್ ನಿಂದ ಮೇ ವರೆಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಲಿದೆ. ಈಗಾಗಲೇ ಟ್ಯಾಂಕರ್ ಮತ್ತು ಬೋರ್ವೆಲ್ ಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಖಾಸಗಿ ಬೋರ್ವೆಲ್ ಗಳು ಇಲ್ಲದ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮಳೆಯಾದರೆ ನೀರಿನ ಅಭಾವ ಕೊಂಚ ಮಟ್ಟಿಗೆ ಕಡಿಮೆಯಾಗಲಿದೆ.