ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು, ಮೂರು ದಿನದಲ್ಲಿ ಕರ್ನಾಟಕದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್ಗೆ ಕಳುಹಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯ್ಷಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯ ಬಳಿಕ ಮಾತನಾಡಿದ ಬಿ.ವೈ ವಿಜಯೇಂದ್ರ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಇಬ್ಬರು ವೀಕ್ಷಕರನ್ನು ಕಳಿಸಿದ್ದೆವು. ವೀಕ್ಷಕರಿಂದ ಬಂದಿರುವ ಹೆಸರುಗಳನ್ನು ಸಭೆಯ ಮುಂದೆ ಇಟ್ಟಿದ್ದೇವೆ. , ಮೂರು ದಿನದಲ್ಲಿ ಹಾಲಿ ಸಂಸದರ ಹೆಸರುಗಳನ್ನೂ ಒಳಗೊಂಡಂತೆ ಕರ್ನಾಟಕದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್ಗೆ ಕಳುಹಿಸಲಾಗುತ್ತದೆ ಎಂದರು.