ಪೋರ್ಟ್ ಲೂಯಿಸ್, ಮಾರಿಷಸ್: ಮಾರಿಷಸ್ ನಲ್ಲಿ ಹಿಂದೂ ಹಬ್ಬದ ಆಚರಣೆಯ ಸಂದರ್ಭದಲ್ಲಿ ಭಾನುವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಆರು ಮಂದಿ ಸಜೀವವಾಗಿ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದೂ ದೇವತೆಗಳ ಪ್ರತಿಮೆಗಳನ್ನು ಪ್ರದರ್ಶಿಸುವ ಮರದ ಮತ್ತು ಬಿದಿರಿನ ಗಾಡಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸ್ ಆಯುಕ್ತ ಅನಿಲ್ ಕುಮಾರ್ ದೀಪ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
ಅವಘಡದಲ್ಲಿ ಆರು ಮಂದಿ ಮೃತಪಟ್ಟಿದ್ದು, ಏಳು ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ” ಎಂದು ಅವರು ಹೇಳಿದರು. ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಮುಂಚಿತವಾಗಿ ಪೂರ್ವ ಆಫ್ರಿಕಾದ ದ್ವೀಪ ರಾಷ್ಟ್ರದ ಹಿಂದೂ ಸಮುದಾಯವು ಪವಿತ್ರವೆಂದು ಪರಿಗಣಿಸುವ ಗ್ರ್ಯಾಂಡ್ ಬಾಸ್ಸಿನ್ ಸರೋವರಕ್ಕೆ ಯಾತ್ರಾರ್ಥಿಗಳು ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದರು.