ಹಾವೇರಿ : ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆಯ ಯಲವಿಗೆ ರೈಲು ನಿಲ್ದಾಣದ ಬಳಿ ನಡೆದಿದೆ.
ಸಾಲಬಾಧೆಯಿಂದ ಮನನೊಂದಿದ್ದ ಕುಟುಂಬ ಆತ್ಮಹತ್ಯೆಗೆ ಶರಣಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರನ್ನು ಗೋನಾಳ ಗ್ರಾಮದವರು ಎಂದು ಗುರುತಿಸಲಾಗಿದೆ.
ಮೊದಲು ರೈಲಿಗೆ ಸಿಲುಕಿ ಮಂಜುನಾಥ್ ತೇಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪುತ್ರನನ್ನು ರಕ್ಷಿಸಲು ಹೋಗಿ ರೇಣವ್ವ ಕೂಡ ಸಾವನ್ನಪ್ಪಿದ್ದಾಳೆ. ತಾಯಿ ಹಾಗೂ ಪುತ್ರನ ಸಾವಿನ ಸುದ್ದಿ ತಿಳಿದು ಸಾವಕ್ಕ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.