ನವದೆಹಲಿ : ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಗೆ ಏ.24 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಜೆ ಪ್ರೀತ್ ಆದೇಶ ಹೊರಡಿಸಿದ್ದು, ಏ.24 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿದೆ.
ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಹೋಲಿಸಿದ ವಿವಾದಾತ್ಮಕ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಹೋಲಿಸಿ ಮಾತನಾಡಿದ್ದರು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು. ಜಾತಿಯ ಆಧಾರದ ಮೇಲೆ ತಾರತಮ್ಯವನ್ನು ಕೊನೆಗೊಳಿಸಬೇಕು ಎಂದು ಹೇಳಿದ್ದರು.