HomeKarnatakaರಾಜ್ಯದಲ್ಲಿ ತಾಲಿಬಾನಿ ಸರ್ಕಾರ ನಡೆಯುತ್ತಿದೆ; ಸಂಸದ ಪ್ರತಾಪ್ ಸಿಂಹ ಕಿಡಿ

ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ನಡೆಯುತ್ತಿದೆ; ಸಂಸದ ಪ್ರತಾಪ್ ಸಿಂಹ ಕಿಡಿ

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, 2023ರ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆಯೇ ನಾನು ಹೇಳಿದ್ದೆ. ನೀವು ಕಾಂಗ್ರೆಸ್ ಗೆ ಮತ ಹಾಕಿದರೆ ತಾಲಿಬಾನಿ ಸರ್ಕಾರ ಬರುತ್ತೆ ಎಂದು. ಇಂದು ತಾಲಿಬಾನಿ ಸರ್ಕಾರ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ವಿಧಾನಸೌಧದ ಒಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದರೆ ಯಾರು ಅಧಿಕಾರ ನಡೆಸುತ್ತಿದ್ದಾರೆ ಎಂದು ಸ್ಪಷ್ಟ. ಕಾಂಗ್ರೆಸ್ ಮುಂದುವರೆದರೆ ವಿಧನಸೌಧದ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದರೂ ಅಚ್ಚರಿ ಇಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣಗಳು ನಡೆಯುತ್ತಿವೆ. ಹಿಂದೆ ಡಾ.ಮನಮಹೋನ್ ಸಿಂಗ್ ಪ್ರಧಾನಿ ಆಗಿದ್ದಾಗ ಹತ್ತು ವರ್ಷಗಳ ಕಾಲ ದೇಶಾದ್ಯಂತ ಸರಣಿ ಬಾಂಬ್ ಸ್ಫೋಟಗಳು ನಡೆದವು. ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ. ಹಾಗಾಗಿ ಬಾಂಬ್ ಸ್ಫೋಟ ಪ್ರಕರಣಗಳು ನಡೆಯುತ್ತಿವೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular