ರೈತರಿಗೆ ಗುಡ್ ನ್ಯೂಸ್: ಕೃಷಿ, ಪೂರಕ ಚಟುವಟಿಕೆಗಳಿಗೆ ಜೀವಕಳೆ; 2100 ಕೋಟಿ ರೂ. ವೆಚ್ಚದಲ್ಲಿ ‘ವೃಷಭಾವತಿ ಯೋಜನೆ’ ಜಾರಿ

ಬೆಂಗಳೂರು: 2,100 ಕೋಟಿ ರೂ. ಖರ್ಚು ಮಾಡಿ ವೃಷಭಾವತಿ ಯೋಜನೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ನಾವು ಜನರನ್ನು ದೇವರು – ಧರ್ಮದ ಹೆಸರಲ್ಲಿ ಮರುಳು ಮಾಡಿ ಅಧಿಕಾರ ನಡೆಸುವುದಿಲ್ಲ. ಅನ್ನ – ಆರೋಗ್ಯ – ಅಕ್ಷರ – ಸೂರು – ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ.

ಹಿಂದಿನ ಅವಧಿಯಲ್ಲಿ 3 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಕೆ.ಸಿ.ವ್ಯಾಲಿ ಮತ್ತು ಹೆಚ್.ಎನ್. ವ್ಯಾಲಿ ಯೋಜನೆ ಜಾರಿ ಮಾಡಿದ್ದೆವು. ಈಗ ವೃಷಭಾವತಿ ಯೋಜನೆಯನ್ನು 2,100 ಕೋಟಿ ರೂ. ಖರ್ಚು ಮಾಡಿ ಜಾರಿ ಮಾಡುತ್ತಿದ್ದೇವೆ. ಇದರಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ಜನರ ನೀರಿನ ಬವಣೆ ಶಾಶ್ವತವಾಗಿ ತೀರುತ್ತದೆ. ಈ ಜಿಲ್ಲೆಗಳ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ, ಆ ಮೂಲಕ ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಜೀವಕಳೆ ಬರಲಿದೆ ಬರಲಿದೆ.

https://twitter.com/siddaramaiah/status/1764627066983768440

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read