HomeIndiaBREAKING: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಐವರು ದುರ್ಮರಣ

BREAKING: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಐವರು ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ.

ಆಂಧ್ರಪ್ರದೇಶದ ಮೆಹಬೂಬ ನಗರ ಜಿಲ್ಲೆ ಕೊತಕೋಟ ಬೈಪಾಸ್ ನಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎರ್ಟಿಗಾ ಕಾರ್ ನಲ್ಲಿ ಬಳ್ಳಾರಿ ಮೂಲದವರು ಹೈದರಾಬಾದ್ ಗೆ ಪ್ರಯಾಣಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ ಮೂಲದ ಫಾತಿಮಾ(50), ಅಬ್ದುಲ್ ರೆಹಮಾನ್(30), ಬುಸ್ರಾ(2), ವಾಸೀಂ(1), ಮಾರಿಯಾ(32) ಮೃತಪಟ್ಟವರು ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular