HomeKarnatakaBIG NEWS : ಇಂದು 'ರಾಜ್ಯ ಸರ್ಕಾರಿ SC, ST ನೌಕರ'ರ ಸಮಾವೇಶ :...

BIG NEWS : ಇಂದು ‘ರಾಜ್ಯ ಸರ್ಕಾರಿ SC, ST ನೌಕರ’ರ ಸಮಾವೇಶ : 2 ದಿನ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು

ಬೆಂಗಳೂರು: ಮಾರ್ಚ್ 5ರಂದು ಇಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ರಾಜ್ಯ ಮಟ್ಟದ 5ನೇ ಸಮಾವೇಶವನ್ನು ಆಯೋಜಿಸಲಾಗಿದ್ದು, ಈ ಹಿನ್ನೆಲೆ ಸಮಾವೇಶದಲ್ಲಿ ಭಾಗಿಯಾಗುವಂತ ನೌಕರರಿಗೆ ಅನುಕೂಲವಾಗುವಂತೆ ಮಾರ್ಚ್.5, 6ರಂದು ಎರಡು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ/ಎಸ್.ಟಿ ನೌಕರರ ಸಮನ್ವಯ ಸಮಿತಿಯ ವತಿಯಿಂದ ದಿನಾಂಕ: 05.03.2024 ರಂದು ಬೆಂಗಳೂರಿನ ವಸಂತ ನಗರದಲ್ಲಿರುವ ಡಾ|| ಅಂಬೇಡ್ಕರ್ ಭವನದಲ್ಲಿ ರಾಜ್ಯ ಮಟ್ಟದ 5ನೇ ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ./ಎಸ್.ಟಿ. ನೌಕರರ ಸಮಾವೇಶವನ್ನು ಆಯೋಜಿಸಲಾಗಿದೆ. ಸದರಿ ಸಮಾವೇಶದಲ್ಲಿ ಭಾಗವಹಿಸುವ ಬೆಂಗಳೂರು ನಗರ ಜಿಲ್ಲೆಯ ಸಂಘದ ಸದಸ್ಯರು ಅಧಿಕಾರಿ/ನೌಕರರಿಗೆ ದಿನಾಂಕ: 05.03.2024 ರಂದು ಒಂದು ದಿನ ಮಾತ್ರ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಸಂಘದ ಸದಸ್ಯ ಅಧಿಕಾರಿ/ನೌಕರರಿಗೆ ಪ್ರಯಾಣ ದಿನಗಳೂ ಸೇರಿದಂತೆ ದಿನಾಂಕ: 05.03.2024 ಮತ್ತು 06.03.2024 ಗಳಂದು ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.

ಮುಂದುವರೆದು, ಸದರಿ ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಸಮ್ಮೇಳನದ ಸಂಘಟಕರಿಂದ ಹಾಜರಾತಿ ಪ್ರಮಾಣ ಪತ್ರವನ್ನು ಪಡೆಯುವ ಷರತ್ತಿಗೊಳಪಟ್ಟು ರಜೆಯನ್ನು ಮಂಜೂರು ಮಾಡಲು ಸಕ್ಷಮ ಪ್ರಾಧಿಕಾರ ಈ ರಜೆಯನ್ನು ಮಂಜೂರು ಮಾಡತಕ್ಕದ್ದು ಎಂದು ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular