ಬೆಂಗಳೂರು : ಶಿವರಾತ್ರಿ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ KSRTC ಯಿಂದ 1,500 ಹೆಚ್ಚುವರಿ ವಿಶೇಷ ಬಸ್ ಸಂಚಾರದ ವ್ಯವಸ್ಥೆ ಮಾಡಿದೆ.
ಶಿವರಾತ್ರಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು KSRTC 1,500 ಹೆಚ್ಚುವರಿ ವಿಶೇಷ ಬಸ್ ಸಂಚಾರದ ವ್ಯವಸ್ಥೆ ಮಾಡಿದೆ.
ದಿನಾಂಕ 08.03.2024 ರಂದು ಮಹಾಶಿವರಾತ್ರಿ ಹಾಗೂ ದಿನಾಂಕ:09.03.2024 ಮತ್ತು 10.03.2024 ವೀಕೆಂಡ್ ಹಿನ್ನೆಲೆ ದಟ್ಟಣೆ ಕಡಿಮೆ ಮಾಡಲು ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 07.03.2024 ರಿಂದ 10.03.2024 ರವರೆಗೆ ಬೆಂಗಳೂರಿನಿಂದ ಹಲವು ಕಡೆಗೆ 1500 ಹೆಚ್ಚುವರಿ ವಾಹನಗಳ ಬಸ್ ಸಂಚಾರದ ವ್ಯವಸ್ಥೆ ಮಾಡಿದೆ.
• ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.
• ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಸೇರಿ ಹಲವು ಕಡೆ ಬಸ್ ಸಂಚರಿಸಲಿದೆ.