HomeKarnataka50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ

50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ನಗರದ ಎಪಿಎಂಸಿ ಕಾರ್ಯದರ್ಶಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಲೈಸೆನ್ಸ್ ಕೇಸ್ ವರ್ಕರ್ ಯೋಗೇಶ್ ಬಂಧಿತರು. ಎಪಿಎಂಸಿಯಲ್ಲಿ ಮಳಿಗೆಗಳಿಗಾಗಿ ರವೀಂದ್ರ ನೇರಳೆ ಅರ್ಜಿ ಸಲ್ಲಿಸಿದ್ದು, ಇದಕ್ಕಾಗಿ ಕಾರ್ಯದರ್ಶಿ ಭೇಟಿ ಮಾಡಿದಾಗ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೇಸ್ ವರ್ಕರ್ ಗೆ ಹಣ ಕೊಡುವಂತೆ ತಿಳಿಸಿದ್ದು, ಲಂಚದ ಹಣದಲ್ಲಿ ಮುಂಗಡವಾಗಿ 50,000 ರೂ. ಸ್ವೀಕರಿಸುವಾಗ ಲೋಕಾಯುಕ್ತ ಡಿ.ವೈ.ಎಸ್.ಪಿ. ಉಮೇಶ್ ಈಶ್ವರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಲಂಚದ ಹಣದ ಸಹಿತ ಇಬ್ಬರನ್ನು ಬಂಧಿಸಲಾಗಿದೆ. ದಾಳಿಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪಿಐ ಸುರೇಶ್, ಸಿಬ್ಬಂದಿ ಮಹಾಂತೇಶ್, ಸುರೇಂದ್ರ, ಯೋಗೇಶ್, ಚನ್ನೇಶ್, ಪ್ರಶಾಂತ್ ಕುಮಾರ್, ಅರುಣ್ ಕುಮಾರ್, ದೇವರಾಜ್, ರಘು ನಾಯ್ಕ, ಪುಟ್ಟಮ್ಮ, ಜಯಂತ್, ವಿ. ಗೋಪಿ, ಪ್ರದೀಪ್ ಕುಮಾರ್ ಭಾಗವಹಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular