ಬೆಂಗಳೂರು: ಮುಜರಾಯಿ ದೇವಸ್ಥಾನಗಳಿಗೆ ಬರುವ ಭಕ್ತರಿಗೆ ನೆರಳು, ನೀರಿನ ವ್ಯವಸ್ಥೆ ಕಲ್ಪಿಸುವಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಮುಜರಾಯಿ ಇಲಾಖೆ ಆಯುಕ್ತರು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದಾರೆ. ಸಾರಿಗೆ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಬೇಸಿಗೆ ಸಂದರ್ಭದಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಇರುವುದರಿಂದ ದೇಗುಲಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ಬಿಸಿಲಿನಲ್ಲಿ ಸರದಿ ಸಾಲಿನಲ್ಲಿ ಭಕ್ತರು ನಿಲ್ಲುವಂತಾಗಬಾರದು. ನೆರಳಿನ ವ್ಯವಸ್ಥೆ ಮಾಡಬೇಕು. ಸ್ಥಳಾವಕಾಶ ಇರುವಕಡೆ ತಾತ್ಕಾಲಿಕ ಪೆಂಡಾಲ್ ಅಳವಡಿಸುವಂತೆ ಎಂದು ತಿಳಿಸಲಾಗಿದೆ.
ದಾನಿಗಳು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಮುಂದೆ ಬಂದರೆ ಅವಕಾಶ ಮಾಡಿಕೊಡಬೇಕು. ಇಲ್ಲವೇ ದೇವಾಲಯದ ನಿಧಿಯಿಂದಲೇ ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂದು ತಿಳಿಸಲಾಗಿದೆ.