ಬೆಂಗಳೂರು : ಸಿಎಂ ಸಿದ್ದರಾಮಯ್ಯರ ಗೃಹ ಕಚೇರಿಗೂ ನೀರಿನ ಬಿಸಿ ತಟ್ಟಿದ್ದು, ಜಲಮಂಡಳಿ ಟ್ಯಾಂಕರ್ ನಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ.
ಹೌದು. ಬೆಂಗಳೂರಿನಲ್ಲಿ ದಿನೇ ದಿನೇ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ಕುಡಿಯುವ ನೀರಿಗೆ ಆಹಾಕಾರ ಶುರುವಾಗಿದೆ. ಬೆಂಗಳೂರಿನ ಸಿಎಂ ಸಿದ್ದರಾಮಯ್ಯರ ಗೃಹ ಕಚೇರಿ ಕೃಷ್ಣದಲ್ಲಿ ನೀರಿನ ಅಭಾವ ಉಂಟಾಗಿದ್ದು, ಜಲಮಂಡಳಿ ಟ್ಯಾಂಕರ್ ನಲ್ಲಿ ನೀರು ಪೂರೈಕೆ ಮಾಡಲಾಗಿದೆ.
ಇಂದು ಗೃಹ ಕಚೇರಿ ಕೃಷ್ಣದಲ್ಲಿ ಬರ ನಿರ್ವಹಣೆ ಸಭೆ ನಡೆಯಲಿದ್ದು, ಸಭೆಗೂ ಮುನ್ನ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಸಂವಾದ ನಡೆಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಇತರೆ ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.