ಬೆಂಗಳೂರು : ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಹಿಯಾಳಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಜನರಿಗೆ ಅನ್ನ ಕೊಡಬೇಕು. ಅದಕ್ಕಾಗಿ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿ ಕೊಡ್ತೀವಿ, ನಮಗೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಕೇಳಿದೆವು. ಕೇಂದ್ರದ ಬಿಜೆಪಿ ಸರ್ಕಾಋ ರಾಜ್ಯದ ಜನರಿಗೆ ಅಕ್ಕಿ ಕೊಡಲು ನಿರಾಕರಿಸಿತು. ಬಡವರ ಅನ್ನ ವಿರೋಧಿಸುವ ಬಿಜೆಪಿಗೆ ನಾಚಿಕೆ ಕೂಡ ಆಗಲಿಲ್ಲ. ಬಳಿಕ ನಾವೇ ಅಕ್ಕಿ ಬದಲಿಗೆ ಹಣವನ್ನು ಪ್ರತಿಯೊಬ್ಬರ ಖಾತೆಗೆ ಹಾಕಿದರೆ, ಈಗ ಫಲಾನುಭವಿಗಳನ್ನು ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಬಡವರನ್ನು ಅವಮಾನಿಸುವುದು ಬಿಜೆಪಿಗೆ ಚಾಳಿ ಆಗಿಬಿಟ್ಟಿದೆ ಎಂದು ಕಿಡಿಕಾರಿದ್ದಾರೆ.