ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, 120 ಬಿ ಪ್ರಕರಣ ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆಶಿ ವಿರುದ್ಧ ಇಡಿ ಅಧಿಕಾರಿಗಳು ದಾಖಲಿಸಿದ್ದ 120 ಬಿ ಪ್ರಕರಣ ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ನ್ಯಾ.ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಜಾರಿ ನಿರ್ದೇಶನಾಲಯದ ತನಿಖೆಯಿಂದ ಡಿಕೆಶಿಗೆ ರಿಲೀಫ್ ಸಿಕ್ಕಂತಾಗಿದೆ.
ಬೆಂಗಳೂರು ಸೇರಿದಂತೆ ಇತರೆಡೆ ಡಿ. ಕೆ. ಶಿವಕುಮಾರ್ಗೆ ಸೇರಿದ ಮನೆಗಳ ಮೇಲೆ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ದಾಳಿ ನಡೆಸಲಾಗಿತ್ತು. ಈ ವೇಳೆ ಅವರ ನಿಕಟವರ್ತಿಗಳ ಮನೆಯಲ್ಲಿ ದೊರೆತಿದ್ದ ಹಣವನ್ನು, ಶಿವಕುಮಾರ್ ಬೇನಾಮಿಯಾಗಿ ಇರಿಸಿದ್ದಾರೆ ಎಂದು ಆರೋಪಿಸಿ ಸಿಬಿಐ 2020ರ ಅ. 3ರಂದು ಎಫ್ಐಆರ್ ದಾಖಲಿಸಿತ್ತು. 120 ‘ಬಿ’ ಅಡಿಯಲ್ಲಿ ಇಡಿ ದಾಖಲಿಸಿರುವ ಈ ಕ್ರಿಮಿನಲ್ ಪ್ರಕರಣದಿಂದ ತಮ್ಮನ್ನು ದೋಷಮುಕ್ತಗೊಳಿಸಬೇಕು ಎಂದು ಕೋರಿ ಡಿ. ಕೆ. ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಲ್ಲಿ ಜಯ ಸಿಗದ ಹಿನ್ನೆಲೆ ಡಿಕೆಶಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.