HomeKarnatakaʻನಮ್ಮ ಶಾಲೆ ನಮ್ಮ ಜವಾಬ್ದಾರಿʼ ಕಾರ್ಯಕ್ರಮಕ್ಕೆ ಸಿಎಂ ಚಾಲನೆ : ಸಿದ್ದರಾಮನಹುಂಡಿ ಶಾಲೆಗೆ 10 ಲಕ್ಷ...

ʻನಮ್ಮ ಶಾಲೆ ನಮ್ಮ ಜವಾಬ್ದಾರಿʼ ಕಾರ್ಯಕ್ರಮಕ್ಕೆ ಸಿಎಂ ಚಾಲನೆ : ಸಿದ್ದರಾಮನಹುಂಡಿ ಶಾಲೆಗೆ 10 ಲಕ್ಷ ರೂಪಾಯಿ ದೇಣಿಗೆ

ಬೆಂಗಳೂರು : ನಮ್ಮ ಶಾಲೆ ನಮ್ಮ ಜವಾಬ್ದಾರಿ- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಕ್ರಾಂತಿಕಾರಕ ಯೋಜನೆಯಾದ “ನಮ್ಮ ಶಾಲೆ ನಮ್ಮ ಜವಾಬ್ದಾರಿ” – ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ತಾವು ಓದಿದ ಸರ್ಕಾರಿ ಕುಪ್ಪೇಗಾಲದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೆ.ಪಿ.ಎಸ್ ಸಿದ್ದರಾಮನಹುಂಡಿ ಶಾಲೆಗೆ 10 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಉದ್ಘಾಟಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ, ಕೈಗಾರಿಕಾ ಸಚಿವರಾದ ಎಂ. ಬಿ.ಪಾಟೀಲ್ , ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವರಾದ ಸುಧಾಕರ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular