HomeKarnatakaBREAKING NEWS: ಸಿಎಂ, ಡಿಸಿಎಂ, ಗೃಹ ಸಚಿವರಗೆ ಬಾಂಬ್ ಬೆದರಿಕೆ; ಬೆಂಗಳೂರಿನ ವಿವಿಧೆಡೆ ಬಾಂಬ್ ಸ್ಫೋಟಿಸುವುದಾಗಿ...

BREAKING NEWS: ಸಿಎಂ, ಡಿಸಿಎಂ, ಗೃಹ ಸಚಿವರಗೆ ಬಾಂಬ್ ಬೆದರಿಕೆ; ಬೆಂಗಳೂರಿನ ವಿವಿಧೆಡೆ ಬಾಂಬ್ ಸ್ಫೋಟಿಸುವುದಾಗಿ ಸಂದೇಶ

ಬೆಂಗಳೂರು: ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ ಘಟನೆ ಬೆನ್ನಲ್ಲೇ ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಇ-ಮೇಲ್ ಮೂಲಕ ಬೆದರಿಕೆ ಕರೆ ಮಾಡಲಾಗಿದ್ದು, ಬೆಂಗಳೂರಿನ ಬಸ್, ರೈಲು ನಿಲ್ದಾಣ ಸೇರಿದಂತೆ ವಿವಿಧೆಡೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

2.5 ಮಿಲಿಯನ್ ಡಾಲರ್ ನೀಡಬೇಕು ಇಲ್ಲವಾದಲ್ಲಿ ರಾಮೇಶ್ವರಂ ಕೆಫೆ ಮಾದರಿಯಲ್ಲಿಯೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಲವರಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಂಬ್ ಬೆದರಿಕೆ ಸಂದೇಶ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ತನಿಖೆ ಚುರುಕುಗೊಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular